ಸಚಿವ ಸ್ಥಾನ ಸಿಗದಿರುವುದಕ್ಕೇ ಪ್ರತಿಭಟಿಸಿ ನಾನು ಸದನಕ್ಕೆ ಹೋಗುತ್ತಿಲ್ಲ ; ನೇರವಾಗಿ ಹೇಳಿಕೆ ನೀಡಿದ ಕೆ.ಎಸ್.ಈಶ್ವರಪ್ಪ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೂ ಸದನದ ಕಲಾಪದತ್ತ ಸುಳಿಯದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸದನದಿಂದ ಗೈರಾದ ಬಗ್ಗೆ ಕಾರಣಗಳನ್ನು ಬಹಿರಂಗಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ನನಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನವಿದೆ. ಸಚಿವ ಸ್ಥಾನ ಸಿಗದಿರುವುದಕ್ಕೇ ನಾನು ಸದನಕ್ಕೆ ಹೋಗುತ್ತಿಲ್ಲ ಎಂದು ಹೇಳುವ ಮೂಲಕ ಆಡಳಿತ ಪಕ್ಷದ ವಿರುದ್ಧವೇ ಮಾಜಿ ಸಚಿವ ಈಶ್ವರಪ್ಪ ಬಹಿರಂಗವಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.
ಸಂಪುಟಕ್ಕೆ ಸೇರಿಸಿಕೊಳ್ಳುವುದು ಕೇಂದ್ರ ನಾಯಕರಿಗೆ ಬಿಟ್ಟದ್ದು. ಆದರೆ ನನಗೆ ಕ್ಲೀನ್ ಚಿಟ್ ಸಿಕ್ಕಿದರೂ ಸಚಿವ ಸ್ಥಾನ ನೀಡಲು ವಿಳಂಬ ಮಾಡುತ್ತಿದ್ದಾರೆ. ಇದನ್ನು ಮುಚ್ಚು ಮರೆಯಿಲ್ಲದೇ ಹೇಳುತ್ತೇನೆ. ಈ ಬಗ್ಗೆ ನನಗೆ ಅಸಮಾಧಾನವಿದೆ. ಹಾಗಾಗಿ ಸದನದಿಂದ ದೂರ ಉಳಿದಿದ್ದೇನೆ ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
ಸಚಿವ ಸ್ಥಾನ ಸಿಗದಿರುವುದಕ್ಕೆ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವ ಈಶ್ವರಪ್ಪ ವಿಧಾನಸಭೆ ಚುನಾವಣೆ ಸಮಿಪಿಸುತ್ತಿರುವ ಸಂದರ್ಭದಲ್ಲಿಯೇ ಕೇಂದ್ರ ನಾಯಕರ ವಿರುದ್ಧವೂ ಅಸಮಾಧಾನ ಹೊರಹಾಕಿದ್ದು, ರಾಜ್ಯ ಬಿಜೆಪಿಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ED ವಿಚಾರಣೆ ವೇಳೆ ವೈದ್ಯರ ನೆರವು ಕೋರಿದ ಡಿ.ಕೆ.ಶಿವಕುಮಾರ್
https://pragati.taskdun.com/politics/d-k-shivakumaredenquiry/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ