ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಘೋಷಣೆಗೂ ಮುನ್ನವೇ ನಿವೃತ್ತಿ ಪರ್ವ ಆರಂಭವಾಗಿದ್ದು, ಘಟಾನುಘಟಿ ನಾಯಕರೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಭೀತಿಯಲ್ಲಿ ಸಾಲು ಸಾಲು ಬಿಜೆಪಿ ಮುಖಂಡರು ಚುನಾವಣೆಯಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ. ಎಸ್.ಎ.ರವೀಂದ್ರನಾಥ್, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬೆನ್ನಲ್ಲೇ ಇದೀಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿರುವುದು ಅಚ್ಚರಿಗೆ ಕಾರಣವಾಗಿದೆ.
ಟಿಕೆಟ್ ಘೋಷಣೆಗೂ ಮುನ್ನವೇ ಕೇಸರಿ ಮನೆಯಲ್ಲಿ ಕಂಪನ ಆರಂಭವಾಗಿದೆ. ಈಗಾಗಲೇ ರವೀಂದ್ರನಾಥ್ ಹಾಗೂ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈ ಬಾರಿ ವಿಧಾನಸಭೆಯ ಚುನವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಘೋಷಿಸಿದ್ದರು. ಇದರ ನಡುವೆಯೇ ಇದೀಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಇ-ಮೇಲ್ ಮೂಲಕ ರಾಜಕೀಯ ನಿವೃತ್ತಿ ಪಡೆಯುವುದಾಗಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ