
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಚುನಾವಣೆ ಎಂದರೆ ಬಿಜೆಪಿ ಗೆಲುವು ಎಂದರ್ಥ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯೇ ಗೆಲ್ಲುತ್ತಾರೆ.ಇತ್ತೀಚೆಗೆ ನಡೆದ 15 ಕ್ಷೇತ್ರದ ಉಪಚುನಾವಣೆಯಲ್ಲಿ ಕೂಡ ಬಿಜೆಪಿ 12 ಸ್ಥಾನ ಗೆದ್ದಿತ್ತು. ಹಾಗಾಗಿ, ಯಾವುದೇ ಚುನಾವಣೆಗಳು ನಡೆದರೂ ಬಿಜೆಪಿಯೇ ಗೆಲ್ಲುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಒಂದು ಕಡೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬಡಿದಾಡುತ್ತಿದ್ದಾರೆ. ಇನ್ನೊಂದೆಡೆ ಕುಮಾರಸ್ವಾಮಿ ನಮ್ಮದೂ ಒಂದು ಪಕ್ಷ ಇದೆ ಎನ್ನುತ್ತಿದ್ದಾರೆ. ಈಗಾಗಲೇ ಕುಮಾರಸ್ವಾಮಿ ಸರ್ಕಾರ ಹಾಗೂ ಸಿಎಂ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಅವರೆಲ್ಲ ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ