Politics

*ಕೆ.ಎಸ್. ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ.

ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಸಿದ್ದೇಗೌಡ ನೀಡಿದ ದೂರಿನ ಹಿನ್ನೆಲೆಯಲ್ಲಿ ಸುಮೋಟೋ ಕೇಸ್ ದಾಖಲಿಸಲಾಗಿದೆ.

ನ.13ರಂದು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕೆ.ಎಸ್.ಈಶ್ವರಪ್ಪ, ವಕ್ಫ್ ವಿಚಾರವಾಗಿ ಮುಸ್ಲಿಂರ ವಿರುದ್ಧ ಮಾತನಡಿದ್ದರು. ರಕ್ತಕ್ರಾಂತಿ ಹೇಳಿಕೆ ನೀಡಿದ್ದರು, ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಮುಸ್ಲಿಮರಿಗೆ ರಸ್ತೆಯಲ್ಲಿ ಹುಡುಕಿ ಹೊಡೆಯಬೇಕಾಗುತ್ತದೆ ಎಂದು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ.

Home add -Advt


Related Articles

Back to top button