ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚ್ನ ಸ್ವೀಕರಿಸುತ್ತಿದ್ದಂತೆ ಮಠಾಧೀಶರನ್ನು ಭೇಟಿಯಾದ ಕೆ.ಎಸ್.ಈಶ್ವರಪ್ಪ, ನನ್ನನ್ನು ಉಪಮುಖ್ಯಮಂತ್ರಿಯಾಗುವಂತೆ ಒತ್ತಾಯಿಸುತ್ತಿದ್ದಾರೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಬಿಎಸ್ ವೈ ಸಿಎಂ ಸ್ಥಾನ ಬಿಡುವ ದಿನದಿಂದ ನಾನು ಸಿಎಂ ಆಗಬೇಕು ಎಂಬ ಚರ್ಚೆ ಇತ್ತು. ಈಗ ಡಿಸಿಎಂ ಆಗಬೇಕು ಎಂದು ಮಠಾಧೀಶರು ಒತ್ತಾಯಿಸುತ್ತಿದ್ದಾರೆ. ಸ್ವಾಮೀಜಿಗಳು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ನಾಯಕರು ಹಾಗೂ ರಾಜ್ಯ ನಾಯಕರ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.
ಬೊಮ್ಮಾಯಿ ಶ್ಯಾಡೋ ಸಿಎಂ ಎಂದು ಹೇಳಲು ನಾನು ಸಿದ್ಧನಿಲ್ಲ. ಸರ್ವಾನುಮತದಿಂದ ಅವರನ್ನು ಆಯ್ಕೆ ಮಾಡಲಾಗಿದೆ. ಉತ್ತಮ ಆದಳಿತ ನೀಡುವ ವಿಶ್ವಾಸವಿದೆ ಎಂದು ಹೇಳಿದರು. ಒಟ್ಟಾರೆ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆ.ಎಸ್.ಈಶ್ವರಪ್ಪ ಕಸರತ್ತು ನಡೆಸಿದ್ದಾರೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ