Belagavi NewsBelgaum NewsKannada NewsKarnataka News

*ಎಪ್ರಿಲ್ 15 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಸಂಭವ*

ಪ್ರಗತಿವಾಹಿನಿ ಸುದ್ದಿ : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೆ ಮಳೆ ಸುರಿದಿದ್ದು ಏಪ್ರಿಲ್ 15 ರವರೆಗೆ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್ 15 ರವರೆಗೆ ಸಾಧಾರಣ ಮಳೆಯಾಗಲಿದ್ದು, ಜತೆಗೆ ಒಣಹವೆ ವಾತಾವರಣ ಕೂಡ ಮುಂದುವರಿಯಲಿದೆ ಎಂದು ಹೇಳಲಾಗಿದೆ.

Home add -Advt

ಹವಾಮಾನ ಇಲಾಖೆಯ ವರದಿಯ ಪ್ರಕಾರ ಮುಂದಿನ ಕೆಲವು 2 ದಿನಗಳ ಕಾಲ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಏರುಪೇರಾಗಲಿದೆ. ಬೆಂಗಳೂರು, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಈ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.ರಾತ್ರಿಯ ಸಮಯದಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಭಾಗದಲ್ಲಿ ಮಳೆಯ ಮುನ್ಸೂಚನೆ ಇದ್ದರೂ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಸದ್ಯಕ್ಕೆ ಮಳೆಯ ಲಕ್ಷಣಗಳಿಲ್ಲ. ಕಲಬುರಗಿ, ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದ್ದು ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

Related Articles

Back to top button