Kannada NewsKarnataka NewsLatest

*ಸಂಗೀತ ವಿದ್ವಾನ್ ಪ್ರಶಸ್ತಿ: ಪಂ.ಕೆ.ವೆಂಕಟೇಶ್ ಕುಮಾರ್ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಸಂಗೀತ ದಿಗ್ಗಜ ಪಂಡಿತ್ ಕೆ.ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದೇಶ-ವಿದೇಶಗಳಲ್ಲಿ ಅದ್ಭುತ ಗಾಯನದ ಮೂಲಕ ಖ್ಯಾತಿ ಪಡೆದಿರುವ ಹಿಂದೂಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರಾಗಿರುವ ಪಂ.ವೆಂಕಟೇಶ್ ಕುಮಾರ್ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ನೀಡುತ್ತಿರುವುದು ಸಂತಸದ ವಿಷಯ. ದಸರಾ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 22ರಂದು ಅರಮನೆ ಮುಂಭಾಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ.

Home add -Advt

Related Articles

Back to top button