
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ ಕಾಂತಾರಾ ಸಿನಿಮಾ ದೇಶಾದ್ಯಂತ ಸದ್ದುಮಾಡುತ್ತಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆಯಾಗಿ ಹಲವು ದಿನಗಳೇ ಕಳೆದರು ಈಗ ಹೊಸ ವಿವಾದವೊಂದು ಸೃಷ್ಟಿಯಾಗಿದೆ. ಕಾಂತಾರಾ ಚಿತ್ರ ಪ್ರದರ್ಶನಕ್ಕೆ ತಡೆ ನೀಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.
ಕಾಂತಾರಾ ಸಿನಿಮಾದಲ್ಲಿ ದಲಿತರಿಗೆ ಹಾಗೂ ದೈವ ನರ್ತಕರ ಕುಟುಂಬದವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ದಲಿತ ಮಹಿಳೆಯರು, ಯುವ ಸಮುದಾಯಕ್ಕೆ ಅವಹೇಳನ ಮಾಡಲಾಗಿದೆ. ಕೆಳ ಸಮುದಾಯದ ಯುವಕರನ್ನು ಪೋಲಿ ಹುಡುಗರು ಎಂಬಂತೆ ಬಿಂಬಿಸಲಾಗಿದೆ. ಹಣ, ಹೆಂಡ ಕೊಟ್ಟರೆ ಏನು ಬೇಕಾದರೂ ಮಾಡ್ತಾರೆ ಎಂದು ತೋರಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಅಷ್ಟೇ ಅಲ್ಲ ದೈವ ನರ್ತಕರು ಕೂಡ ನಮ್ಮ ಜೊತೆ ನೋವು ತೋಡಿಕೊಂಡಿದ್ದಾರೆ. ಅವರು ದೈವ ನರ್ತಕರ ಕುಟುಂಬದವರನ್ನೂ ಸಿನಿಮಾದಲ್ಲಿ ಅವಮಾನಿಸಲಾಗಿದೆ. ಹಾಗಾಗಿ ಸಿನಿಮಾ ಪ್ರದರ್ಶನಕ್ಕೆ ತಡೆ ನೀಡಬೇಕು. ಸೆನ್ಸಾರ್ ಮಂಡಳಿ ಕಾಂತಾರಾ ಚಿತ್ರವನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಸಮತಾ ಸೈನಿಕದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಲಾಕ್ಷ ಒತ್ತಾಯಿಸಿದ್ದಾರೆ.
ತಾಯಿ, ನವಜಾತ ಶಿಶು ಹಾಗೂ ಮಕ್ಕಳ ಆರೋಗ್ಯದ ಕುರಿತಾದ ತೃತೀಯ ಅಂತರಾಷ್ಟ್ರೀಯ ಸಮ್ಮೇಳನ
https://pragati.taskdun.com/latest/klehospitaldr-prabhakara-kore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ