
ಪ್ರಗತಿವಾಹಿನಿ ಸುದ್ದಿ; ರಾಮನಗರ: ಪ್ರೇಮಿಗಳಿಬ್ಬರೂ ಬೆಟ್ಟದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಬ್ಬಾಳು ಬೆಟ್ಟದಲ್ಲಿ ನಡೆದಿದೆ.
ಸತೀಶ್ (21) ಹಾಗೂ ಚಂದನಾ (21) ಆತ್ಮಹತ್ಯೆ ಮಾಡಿಕೊಂಡವರು. ಒಂದು ವರ್ಷದ ಹಿಂದೆ ವಿವಾಹವಾಗಿದ್ದ ಚಂದನಾ ಇದೀಗ ಪ್ರೇಮಿ ಜೊತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮೃತರು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉರುಗಮ್ ಮೂಲದವಾರು. ಸತೀಶ್ ಹಾಗೂ ಚಂದನಾ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ತಮಿಳುನಾಡಿನ ಹೊಸೂರಿನಲ್ಲಿ ಸತೀಶ್ ಟ್ಯಾಕ್ಸಿ ಚಾಲಕನಾಗಿದ್ದ. ಒಂದು ವರ್ಷದ ಹಿಂದೆ ಚಂದನಾಳನ್ನು ರಾಮನಗರ ಜಿಲ್ಲೆಗೆ ವಿವಾಹ ಮಾಡಿಕೊಡಲಾಗಿತ್ತು. ಕಳೆದ ನಾಲ್ಕು ದಿನಗಳಿಂದ ಚಂದನಾ, ಪತಿ ಮನೆಯಿಂದ ನಾಪತ್ತೆಯಾಗಿದ್ದಳು ಎನ್ನಲಾಗಿದೆ.
ಆದರೆ ಈಗ ಪ್ರಿಯಕರ ಸತೀಶ್ ಜೊತೆ ಚಂದನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರೇಮಿಗಳಿಬ್ಬರೂ ಸೊಂಟಕ್ಕೆ ವೇಲ್ ಕಟ್ಟಿಕೊಂಡು ಕಬ್ಬಾಳು ಬೆಟ್ಟದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಕ್ಕನ ಹತ್ಯೆಗೆ ಭಾವನಿಗೆ ಸಾಥ್ ನೀಡಿದ ಸಹೋದರ