
ಪ್ರಗತಿವಾಹಿನಿ ಸುದ್ದಿ; ಕಾಬೂಲ್: ಮನೆ ಹೊಸ್ತಿಲು ದಾಟಿ ಯುವತಿಯೊಬ್ಬಳು ಪೊಲೀಸ್ ಅಧಿಕಾರಿ ಕೆಲಸಕ್ಕೆ ಸೇರಿದ್ದಾಳೆ ಎಂಬ ಕಾರಣಕ್ಕೆ ದುಷ್ಕರ್ಮಿಗಳು ಯುವತಿಯ ಕಣ್ಣು ಕಿತ್ತ ಘೋರ ಘಟನೆ ಅಪ್ಘನಿಸ್ತಾದ ಘಜನಿ ಪ್ರಾಂತ್ಯದಲ್ಲಿ ನಡೆದಿದೆ.
ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಹಿಳಾ ಪೊಲೀಸ್ ಅಧಿಕಾರಿಯ ಕಣ್ಣು ಕಿತ್ತಿದ್ದಾರೆ. ದಾಳಿಗೊಳಗಾದ ಯುವತಿಯನ್ನು 25 ವರ್ಷದ ಖತೇರಾ ಎಂದು ಗುರುತಿಸಲಾಗಿದೆ.
ಚಿಕ್ಕಂದಿನಿಂದ ಸರ್ಕಾರಿ ಕೆಲಸಕ್ಕೆ ಸೇರಬೇಕು ಎಂದು ಕನಸು ಕಂಡು, ಕಷ್ಟಪಟ್ಟು ಓದಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಯುವತಿ ಪೊಲೀಸ್ ಠಾಣೆಯಿಂದ ಹೊರಬರುತ್ತಿದ್ದಂತೆಯೇ ದುಷ್ಕರ್ಮಿಗಳು ಈ ದಾಳಿ ನಡೆಸಿ ಕಣ್ಣು ಕಿತ್ತಿದ್ದಾರೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದು ತಾಲಿಬಾನಿಗಳ ಕೃತ್ಯವಿರಬಹುದು ಎಂದು ಶಂಕಿಸಲಾಗಿದೆ.