*ಕಡಲ ಕೊರೆತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ: ಖುದ್ದು ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ: ವರುಣಾರ್ಭಟಕ್ಕೆ ಕರಾವಳಿ ಜಿಲ್ಲೆಗಳು ತತ್ತರಿಸಿ ಹೋಗಿವೆ. ಉಡುಪಿಯಲ್ಲಿ ಕಡಲ ಕೊರೆತದಿಂದಾಗಿ ಹಲವು ಗ್ರಾಮಗಳು, ಮನೆಗಳು ಹಾನಿಗೊಳಗಾಗಿದ್ದು, ಶಾಲೆಗಳಿಗೆ ರಜೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಉಡುಪಿಗೆ ತೆರಳಿದ್ದಾರೆ.
ಭಾನುವಾರ ಬೆಳಗ್ಗೆ ಉಡುಪಿಯ ಪಡು ತೋಣ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು (ಹೂಡೆ) ಗ್ರಾಮಕ್ಕೆ ಭೇಟಿ ನೀಡಿ, ಕಡಲ ಕೊರತದಿಂದ ಹಾನಿಗೊಳಗಾದ ಪ್ರದೇಶವನ್ನು ವೀಕ್ಷಣೆ ಮಾಡಿದರು.
ಈ ವೇಳೆ ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್. ಆರ್. ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ