Kannada NewsKarnataka NewsNational

ಕಾಫಿ ತೋಟದ ಕೆರೆಗೆ ಬಿದ್ದು ಕಾಡಾನೆ ಸಾವು

ಪ್ರಗತಿವಾಹಿನಿ ಸುದ್ದಿ: ಕಾಫಿ ತೋಟದ ಕೆರೆಗೆ ಬಿದ್ದು ಕಾಡಾನೆಯೊಂದು ಮೃತಪಟ್ಟಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿ ಸಮೀಪದಲ್ಲಿ ನಡೆದಿದೆ. 

ಒಂಟಿಯಂಗಡಿಯ ಪಚ್ಚಾಟ್ ನ ಮುಕ್ಕಾಟೀರ ನಂದ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ತೋಟಕ್ಕೆ ನೀರುಣಿಸಲು ಕೆರೆ ತೋಡಲಾಗಿತ್ತು. ಕಾಡಾನೆಗಳ ಗುಂಪು ಆಹಾರ ಅರಸಿ ತೋಟಕ್ಕೆ ಬಂದಿದ್ದು,  ಈ ವೇಳೆ 15 ವರ್ಷ ಪ್ರಾಯದ ಗಂಡಾನೆ ನೀರಿಗೆ ಬಿದ್ದು ಮೃತಪಟ್ಟಿದೆ. 

ಸದ್ಯ ಸ್ಥಳಕ್ಕೆ ಅರಣ್ಯ ಇಲಾಖೆ  ಅಧಿಕಾರಿಗಳ ತಂಡ ಭೇಟಿ ನೀಡಿ ಜೆಸಿಬಿ ಮೂಲಕ ಆನೆಯ ಮೃತದೇಹವನ್ನು ಹೊರ ತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ರವಾನಿಸಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button