Cancer Hospital 2
Bottom Add. 3

*ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆ ಸೇರಿ ಮೂವರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಕಡೂರು: ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಚಿಕ್ಕಮಗಳೂರಿನ ಕಡೂರು ಪೊಲೀಸರು ಬಂಧಿಸಿದ್ದಾರೆ.

ಕಡೂರಿನ ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಅಮಲು ಬರಿಸುವ ಔಷಧ ನೀಡಿ ಲೈಂಗಿಕ ದೌರ್ಜನ್ಯವೆಸಗಲಾಗುತ್ತಿತ್ತು. ಸರ್ಕಾರಿ ಅಧಿಕಾರಿಯಿಂದಲೇ ಈ ಕೃತ್ಯ ನಡೆದಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.

ಡಿ.ದರ್ಜೆ ನೌಕರ ಸುರೇಶ್, ಶುಶ್ರೂಶಕಿ ಚಂದನ, ವಿನಯ್ ಬಂಧಿತರು. ಲೈಂಗಿಕ ದೌರ್ಜನ್ಯ ನಡೆಸಿದ್ದ ವಿನಯ್ ನರ್ಸ್ ಪ್ರಿಯಕರನಾಗಿದ್ದಾನೆ.

ಡಿ.ದರ್ಜೆಯ ನೌಕರ ಸುರೇಶ್ ಎಂಬಾತ ಮೊದಲಿಗೆ ಪ್ಯಾರಾ ಮೆಡಿಕಲ್ ಕೋರ್ಸ್ ಕೊಡಿಸುತ್ತೇನೆ ಎಂದು ವಸತಿ ಶಾಲೆ ವಿದ್ಯಾರ್ಥಿನಿಯರನ್ನು ನಂಬಿಸುತ್ತಿದ್ದ. ಪರೀಕ್ಷೆ ಪಾಸಾದರೆ ಕೆಲಸ ಸಿಗುತ್ತದೆ ಎಂದು ಹೇಳುತ್ತಿದ್ದ . ಇದಕ್ಕೆ ಮಕ್ಕಳ ಪೋಷಕರು ನಂಬುತ್ತಿದ್ದರು. ಬಳಿಕ ವಿದ್ಯಾರ್ಥಿನಿಯರನ್ನು ನರ್ಸ್ ಚಂದನಾ ಬಳಿ ಕರೆದೊಯ್ಯುತ್ತಿದ್ದ. ಆರೋಗ್ಯ ಕೇಂದ್ರಕ್ಕೆ ಬರುವ ವಿದ್ಯಾರ್ಥಿನಿಯರಿಗೆ ಟೀ, ಕಾಫಿಯಲ್ಲಿ ಮತ್ತು ಬರುವ ಔಷಧ ಬೆರೆಸಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದಳು. ಅರೆ ಪ್ರಜ್ಞಾವಸ್ಥೆಯಲ್ಲಿದ್ದ ವಿದ್ಯಾರ್ಥಿನಿಯರ ಮೇಲೆ ವಿನಯ್ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.

Bottom Add3
Bottom Ad 2

You cannot copy content of this page