
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜಕೀಯ ನಾಯಕರನ್ನು ಬೆಂಬಿಡದೇ ಕಾಡುತ್ತಿದೆ. ಇದೀಗ ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಜ್ವರದಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಈ ವೇಳೆ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.
ಸಧ್ಯ ಕಾಗೋಡು ತಿಮ್ಮಪ್ಪ ಅವರನ್ನು ಸಾಗರದಿಂದ ಬೆಂಗಳೂರಿಗೆ ಕರೆ ತರಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ