Latest

*ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಮುನ್ಸೂಚನೆ; ಆರೇಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಅಲ್ಲಲ್ಲಿ ಭಾರಿ ಮಳೆಯಾಗುತ್ತಿದೆ. ಈ ನಡುವೆ ಇಂದು ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Related Articles

Back to top button