Latest

2 ವರ್ಷದ ಮಗುವಿನಲ್ಲೂ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ಕಲಬುರಗಿಯಲ್ಲಿ ಎರಡು ವರ್ಷದ ಹೆಣ್ಣು ಮಗುವಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕವನ್ನುಂಟುಮಾಡಿದೆ.

ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯ 2 ವರ್ಷದ ಮಗುವಿನಲ್ಲಿ ಕೊರೊನಾ ಪಾಸಿಟೀವ್ ಬಂದಿದ್ದು, ಈ ಮಗುವಾಗಲಿ ಮನೆಯವರಾಗಲಿ ಯಾವುದೇ ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕ ಹೊಂದಿರದೇ ಇದ್ದರೂ ಸೋಂಕು ಹರಡಿರುವುದು ಆತಂಕವನ್ನು ಹೆಚ್ಚಿಸಿದೆ.

ಈ ಕುರಿತು ಶಾಸಕ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ಹಂಚಿಕೊಂಡಿದ್ದು, ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚಿಸುವುದಾಗಿ ತಿಳಿಸಿದ್ದಾರೆ.

ಕೊರೊನಾ ಸೋಂಕಿತ ಬಾಲಕಿ ಶನಿವಾರ ಸಂಜೆ ಮನೆ ಮುಂದೆ ಆಟವಾಡಿಕೊಂಡಿದ್ದಾಗ ಗಾಯ ಮಾಡಿಕೊಂಡಿದ್ದಳು. ಬಳಿಕ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಕೊರೊನಾ ಟೆಸ್ಟ್ ಮಾಡಿಸಿದಾಗ ರಿಪೋರ್ಟ್ ಪಾಸಿಟಿವ್ ಇರುವುದಾಗಿ ತಿಳಿದು ಬಂದಿತು. ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ್ ಉಮಾಕಾಂತ, ತಾಲೂಕು ವೈದ್ಯಾಧಿಕಾರಿ ಮೇಕನ್, ಡಿವೈಎಸ್‍ಪಿ ವೆಂಕನಗೌಡ ಪಾಟೀಲ, ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ತಮ್ಮ ಸಿಬ್ಬಂದಿಯೊಂದಿಗೆ ಆಗಮಿಸಿ ಮನೆಯ ಇತರ ಸದಸ್ಯರನ್ನು ವಿಚಾರಣೆ ನಡೆಸಿ ಸುತ್ತಲೂ ಬ್ಯಾರಿಕೇಡ್ ಹಾಕಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

Home add -Advt

Related Articles

Back to top button