Kannada NewsKarnataka NewsLatestNational

*ಆಳಂದ ಮತಗಳವು ಪ್ರಕರಣ: ಓರ್ವ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳುವು ಪ್ರಕರಣ ಸಂಬಂಧ ಎಸ್ ಐಟಿ ತನಿಖಾ ತಂಡ ಪಶ್ಚಿಮ ಬಂಗಾಳದಲ್ಲಿ ಓರ್ವ ಆರೋಪಿಯನ್ನು ಬಂಧಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದ ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಆರೋಪಿಸಿದ್ದರು. ಈ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಇದೀಗ ಮೊದಲ ಆರೋಪಿಯನ್ನು ಬಂಧಿಸಿದ್ದಾರೆ.

ಬಾಪಿ ಅದ್ಯ ಬಂಧಿತ ಆರೋಪಿ. ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಘುಗುರಗಚ್ಚಿ ಹಂಸ್ಕಲಿ ಪ್ರದೇಶದಲ್ಲಿ ಈತನನ್ನು ಬಂಧಿಸಲಾಗಿದ್ದು, ಬೆಂಗಳೂರಿಗೆ ಕರೆತಂದು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಯನ್ನು 12 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿದೆ.

Home add -Advt

Related Articles

Back to top button