Karnataka NewsLatest

*ಇಬ್ಬರು ಜೈಲಾಧಿಕಾರಿಗಳ ತಲೆದಂಡ*

ಪ್ರಗತಿವಾಹಿನಿ ಸುದ್ದಿ: ಕಲಬುರಗಿ ಕಾರಾಗೃಹದಲ್ಲಿ ಖೈದಿಗಳಿಗೆರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಜೈಲಾಧಿಕಾರಿಗಳ ತಲೆದಂಡವಾಗಿದೆ.

ಕಲಬುರಗಿ ಜೈಲಿನಲ್ಲಿ ಕೈದಿಗಳಿಗೆ ಗಾಂಜಾ, ಮದ್ಯ, ಮೊಬೈಲ್ ಸೇರಿದಂತೆ ವಿವಿಧ ರೀತಿಯ ಸೌಲಭ್ಯಗಳು ಸಿಗುತ್ತಿತು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕರಿಗಳು ಜೈಲಿನ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು.

Home add -Advt

ಇದೀಗ ಕರ್ತವ್ಯಲೋಪ ಆರೋದಡಿ ಇಬ್ಬರು ಜೈಲರ್ ಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಸೈನಾಜ್ ನಿಗೆವಾನ್, ಪಾಂಡುರಂಗ ಹರವಾಳ ಅಮಾನತುಗೊಂಡ ಜೈಲಾಧಿಕಾರಿಗಳು. ಇಬ್ಬರು ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಕಲಬುರಗಿ ಜೈಲಿನ ಮುಖ್ಯ ಅಧೀಕ್ಷಕಿ ಡಾ.ಅನಿತಾ ಮಾಹಿತಿ ನೀಡಿದ್ದಾರೆ.

Related Articles

Back to top button