Kannada NewsKarnataka NewsLatest

*ಮದುವೆ ವಿಚಾರವಾಗಿ ಗಲಾಟೆ: ಬಾವಿಗೆ ಹಾರಿ ಮಗಳು ಆತ್ಮಹತ್ಯೆ: ಪುತ್ರಿ ರಕ್ಷಿಸಲು ಹೋಗಿ ತಾಯಿಯೂ ಸಾವು*

ಪ್ರಗತಿವಾಹಿನಿ ಸುದ್ದಿ: ಮದುವೆ ವಿಚಾರವಾಗಿ ಗಲಾಟೆ ನಡೆದು ಮನನೊಂದ ಮಗಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘ್ರ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಜಿಲ್ಲೆಯ ಆಳಂದ ತಾಲೂಕಿನ ತಡಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಯಿ ಜಗದೇವಿ (47) ಹಾಗೂ ಮಗಳು ಮಧುಮತಿ (22) ಮೃತರು.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button