ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಲಬುರಗಿ ಸಂಸದ ಉಮೇಶ್ ಜಾಧವ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಬೆಳಿಗ್ಗೆ ಸಂಸದ ಜಾಧವ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಉಮೇಶ್ ಜಾಧವ್ ಸ್ವತ: ಮಾಹಿತಿ ನೀಡಿದ್ದು, ಸಣ್ಣದಾಗಿ ಎದೆನೋವು ಕಾಣಿಸಿಕೊಂಡಿದ್ದರಿಂದ ಜಯದೇವ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕ ಪಡುವ ಅಗತ್ಯವಿಲ್ಲ, ಬೇಗ ಗುಣಮುಖನಾಗುತ್ತೇನೆ ಎಂದು ತಿಳಿಸಿದ್ದಾರೆ.
ಆಗಸ್ಟ್ ನಲ್ಲಿ ಸಂಸದ ಉಮೇಶ್ ಜಾಧವ್ ಹಾಗೂ ಅವರ ಪುತ್ರ ಶಾಸಕ ಡಾ.ಅವಿನಾಶ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಇದೀಗ ಎದೆನೋವು ಹಿನ್ನೆಲೆಯಲ್ಲಿ ಜಾಧವ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ