ಪ್ರಗತಿವಾಹಿನಿ ಸುದ್ದಿ: ಕಲಬುರಗಿ ಜಿಲ್ಲೆಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮಧ್ಯಾಹ್ನ 1 ಗಂಟೆಗೆ ಶಾಲೆಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಬೆದರಿಕೆ ಸಂದೇಶ ರವಾನಿಸಿದ್ದಾರೆ.
ಕಲಬುರಗಿಯ ಕರುಣೇಶ್ವರ ನಗರದ ಖಾಸಗಿ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ತಮಿಳುನಾಡಿನಿಂದ ಶಾಲೆಯ ಆಡಳಿತ ಮಂಡಳಿಗೆ ಇ-ಮೇಲ್ ರವಾನಿಸಲಾಗಿದ್ದು, ಇದರಲ್ಲಿ ಬಾಂಬ್ ಬೆದರಿಕೆಯೊಡ್ದಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು ಕಂಗಾಲಾಗಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಶಾಲೆಯಲ್ಲಿ ಬಾಂಬ್ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಶೋಕ ನಗರ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ, ವಿದ್ಯಾರ್ಥಿಗಳು ಶಿಕ್ಷಕರನ್ನು ಮನೆಗೆ ತೆರಳುವಂತೆ ಕಳುಹಿಸಿ, ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ