Politics

*ಕಲಬುರಗಿ ಮುಖ್ಯ ರಸ್ತೆಯಲ್ಲಿ ಸಂಚಾರ ನಿಷೇಧ; ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಪೊಲೀಸ್ ಬಿಗಿ ಭದ್ರತೆ*

ಪ್ರಗತಿವಾಹಿನಿ ಸುದ್ದಿ: ಬೀದರ್ ನಲ್ಲಿ ಗುತ್ತಿಗೆದರ ಸಚಿನ್ ಆತ್ಮಹತ್ಯೆ ಪ್ರಕರಣ ಖಂಡಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಇಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಪ್ರತಿಭಟನೆಯ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕಲಬುರಗಿಯಾದ್ಯಂತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಮುಂಜಾಗೃತಾ ಕ್ರಮವಾಗಿ ಕಲಬುರಗಿ ನಗರದ ಜಗತ್ ಸರ್ಕಲ್ ನಿಂದ ಎಸ್ ವಿಪಿ ಸರ್ಕಲ್ ವರೆಗೆ ರಸ್ತೆಯಲ್ಲಿ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12ರವರೆಗೆ ಈ ಮಾರ್ಗದಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ಅಲ್ಲದೇ ಐವಾನ್-ಇ-ಶಾಹಿ ಪ್ರದೇಶದಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ನಿವಾಸದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ನಿಯೋಜಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button