ಪ್ರಗತಿವಾಹಿನಿ ಸುದ್ದಿ: ಬೀದರ್ ನಲ್ಲಿ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಕಲಬುರಗಿ ಜಗತ್ ಸರ್ಕಲ್ ನಿಂದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ನಿವಾಸದತ್ತ ಮುನ್ನುಗ್ಗಿದ್ದಾರೆ. ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಘೋಷಣೆಗಳನ್ನು ಕೂಗಿದ್ದಾರೆ.
ಪ್ರತಿಭತನಾ ಮೆರವ್ಣಿಗೆ ಕಲಬುರಗಿ ಡಿಸಿ ಕಚೇರಿ ಬಳಿ ಸಾಗುತ್ತಿದ್ದ್ಂತೆ ಪೊಲೀಸರು ಬ್ಯಾರಿಕೆಡ್ ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ನಯಕರ ನಡುವೆ ವಾಗ್ವಾದ ನಡೆದಿದೆ. ಪ್ರತಿಭಟನಾಕಾರರು ಬ್ಯಾರಿಕೇಡ್ ಗ್ಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದ್ದಾರೆ.
ಈ ವೇಳೆ ಪೊಲೀರು ಪ್ರತಿಭಟನಾ ನಿರ ಎಂಎಲ್ ಸಿ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಮಿ, ಎನ್.ಮಹೇಶ್, ಉಮೇಶ್ ಜಾದವ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಬಸ್ ಗಳಲ್ಲಿ ತುಂಬಿ ಕರೆದೊಯ್ದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ