ಪ್ರಗತಿವಾಹಿನಿ ಸುದ್ದಿ: ಕಲಬುರಗಿ ನಗರದ ಸೇಡಂ ರಸ್ತೆಯ ಖರ್ಗೆ ಪೆಟ್ರೋಲ್ ಪಂಪ್ ಸಮೀಪದ ವೃತ್ತದಲ್ಲಿರುವ ಕಾಫಿಜಾ ಕೆಫೆಯಲ್ಲಿ ಇಂದು ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ.
ಕೆಫೆಯ 3ನೇ ಮಹಡಿಯಲ್ಲಿರುವ ಕಾಫಿಜಾ ಕೆಫೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಗ್ರಾಹಕರು ಬೆಚ್ಚಿಬಿದ್ದು ಆಚೆ ಓಡೋಡಿ ಬಂದಿದ್ದಾರೆ. ಬೆಂಕಿಯ ಕೆನ್ನಾಲಿಗೆಯಿಂದ ಕ್ಷಣಾರ್ಧದಲ್ಲಿ ಇಡೀ ಕಾಫಿಜಾ ಕೆಫೆ ಮಹಡಿ ಸುಟ್ಟುಕರಕಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎಂಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ