ಟ್ರಾವೆಲ್ ಹಿಸ್ಟರಿಯೇ ಇಲ್ಲದ 5 ವರ್ಷದ ಬಾಲಕನಲ್ಲೂ ಕರೋನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ರಾಜ್ಯದಲ್ಲಿ ಕ್ಷಣ ಕ್ಷಣಕ್ಕೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಮತ್ತೆ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಕಲಬುರಗಿಯ 5 ವರ್ಷದ ಬಾಲಕ ಹಾಗೂ 32 ವರ್ಷದ ಪುರುಷನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 315ಕ್ಕೆ ಏರಿಕೆಯಾಗಿದೆ.

ಸೋಂಕು ಪತ್ತೆಯಾದ 5 ವರ್ಷದ ಬಾಲಕನಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿರೋದು ಆತಂಕಕ್ಕೆ ಕಾರಣವಾಗಿದೆ. ಇನ್ನು 32 ವರ್ಷ ವ್ಯಕ್ತಿ ಬೆಂಗಳೂರಿನಿಂದ ಕಲಬುರಗಿಗೆ ಪ್ರಯಾಣ ಬೆಳೆಸಿದ್ದರು ಎಂದು ತಿಳಿದುಬಂದಿದೆ.

ಕಳೆದ 24 ಗಂಟೆಯಲ್ಲಿ ಒಟ್ಟು 36 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ. ಈ ನಡುವೆ ವಿಜಯಪುರದಲ್ಲಿ ಎರಡು ಕುಟುಂಬಗಳಿಂದ 17 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಜಿಲ್ಲೆಯನ್ನು ರೆಡ್ ಝೋನ್ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button