Latest

*ಸಾಮೂಹಿಕ ಹತ್ಯೆಗೆ ಯತ್ನ: ಮನೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕುಟುಂಬವೊಂದನ್ನು ಸಾಮೂಹಿಕವಾಗಿ ಹತ್ಯೆಗೈಯ್ಯಲು ಯತ್ನಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿಯ ಕಡಣಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗುಂಡೇರಾವ್ ಕುಟುಂಬದವರ ಹತ್ಯೆಗೆ ಶಿವಲಿಂಗಪ್ಪ ಕರಿಕಲ್ ಯತ್ನಿಸಿದ್ದಾರೆ. ಗುಂಡೇರಾವ್ ಮನೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಘಟನೆ ವೇಳೆ 6-7 ಜನರು ಮನೆಯಲ್ಲಿದ್ದರು.

Home add -Advt

ಬೆಂಕಿ ಹಚ್ಚುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕಾಗಮಿಸಿ ಮನೆ ಬಾಗಿಲು ಮುರಿದು ಕುಟುಂಬದವರನ್ನು ರಕ್ಷಿಸಿದ್ದಾರೆ. ಗಾಯಗೊಂಡಿರುವವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮನೆ ಭಾಗಶಃ ಸುತ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಫರಹತಾಬಾದ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button