CrimeKarnataka NewsLatest

*ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘೋರ ಘಟನೆ ಬೆಳಕಿಗೆ ಬಂದಿದೆ.

ಕಲಬುರಗಿ ನಗರದ ಶರಣಶಿರಸಗಿ ಬಳಿ ಈ ಘಟನೆ ನಡೆದಿದೆ. ರೇಣುಕಾ ಶಿಂಧೆ (38) ಕೊಲೆಯಾದ ಮಹಿಳೆ. ಕಳೆದ ಕೆಲ ವರ್ಷಗಳ ಹಿಂದೆ ಸಂಜಯ್ ಜೊತೆ ಮದುವೆಯಾಗಿ ಶರಣಸಿರಸಗಿ ಬಳಿ ವಾಸವಾಗಿದ್ದರು.

ಪತ್ನಿ ರೇಣುಕಾ ಪರ ಪುರುಷನ ಜೊತೆ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ಆಕೆಯ ಪತಿ ಸಂಜಯ್ ಅನುಮಾನ ಪಡುತ್ತಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ನಿನ್ನೆ ರಾತ್ರಿ ಸಹ ಇಬ್ಬರ ನಡುವೆ ಇದೇ ಕಾರಣಕ್ಕೆ ಜಗಳ ನಡೆದಿದ್ದು, ಈ ವೇಳೆ ಕೋಪಗೊಂಡ ಸಂಜಯ್, ರೇಣುಕಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button