ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರಿಗೆ ಈಗ ಜ್ಞಾನೋದಯವಾದಂತೆ ಕಾಣುತ್ತಿದೆ. ತಮ್ಮ ಸರ್ಕಾರವಿದ್ದಾಗ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರಶ್ನಿಸಿದ್ದಾರೆ.
ಡ್ರಗ್ಸ್ ಹಣದಿಂದ ಮೈತ್ರಿ ಸರ್ಕಾರ ಉರುಳಿಸಲಾಗಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವ ಸವದಿ, ಬಿಜೆಪಿ ಸರ್ಕಾರ ರಚನೆಗೂ ಮುನ್ನ ಕುಮಾರಸ್ವಾಮಿಯೇ ಮುಖ್ಯಮಂತ್ರಿಯಾಗಿದ್ದರು. ಆಗ ಅವರು ಪೊಲೀಸರಿಂದ ತನಿಖೆ ಮಾಡಿಸಬೇಕಿತ್ತು ಎಂದರು.
ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾ ಬಗ್ಗೆ ಸರ್ಕಾರ ಸಮಗ್ರ ತನಿಖೆ ನಡೆಸುತ್ತಿದ್ದು, ಸರ್ಕಾರ ಡ್ರಗ್ ಮಾಫಿಯಾದಲ್ಲಿರುವವರನ್ನು ಹೆಡೆಮುರಿ ಕಟ್ಟುವ ಕೆಲಸ ಮಾಡುತ್ತಿದೆ. ಯಾರನ್ನೂ ಕ್ಷಮಿಸೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಸಾರಿಗೆ ಇಲಾಖೆಗೆ ಪ್ರತಿ ದಿನ ಎರಡುವರೆ ಕೋಟಿ ರೂಪಾಯಿ ಹಾನಿಯಾಗುತ್ತಿದೆ. ಆದರೂ ಸಾರಿಗೆ ನೌಕರರ ವೇತನ ನೀಡಲಾಗುತ್ತಿದೆ. ಸರ್ಕಾರದ ನೆರವು ಪಡೆದು 6 ತಿಂಗಳ ವೇತನ ಪಾವತಿಸಲಾಗಿದೆ. ಅಂತರರಾಜ್ಯ ಸಾರಿಗೆ ಪ್ರಾರಂಭದ ಬಗ್ಗೆ ಮಾತುಕತೆ ನಡೆದಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ