
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿ ನೈತಿಕ ಪೊಲೀಸ್ ಗಿರಿ ಮೆರೆದ ಆರೋಪದಲ್ಲಿ ತಂದೆ-ಮಗನನ್ನು ಬಂಧಿಸಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಮಂಗಳೂರು ದಕ್ಷಿಣ ಪೊಲೀಸರು ತಂದೆ-ಮಗನನ್ನು ಬಂಧಿಸಿದ್ದಾರೆ. ಬಂಧಿತರನ್ನು ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂದು ಗುರುತಿಸಲಾಗಿದೆ.
ಮಂಗಳೂರು ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳು ರೈಲ್ವೆ ಹಳಿಯಲ್ಲಿ ಕುಳಿತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ತಂದೆ-ಮಗ ವಿಡಿಯೋ ಮಾಡಲಾರಂಭಿಸಿದ್ದಾರೆ. ಪ್ರಶ್ನಿಸಿದ್ದಕ್ಕೆ ಅಪ್ರಾಪ್ತ ವಿದ್ಯಾರ್ಥಿಯ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣಗಳ್ಲೈ ವಿಡಿಯೋ ಹಾಕಿ ವೈರಲ್ ಮಾದಿದ್ದಾರೆ.
ಇದರಿಂದದ ನೊಂದ ವಿದ್ಯಾರ್ಥಿಗಳು ಆರೋಪಿಗಳ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತಂದೆ ಹಾಗೂ ಮಗನನ್ನು ಪೊಲೀಸರು ಬಂಧಿಸಿದ್ದಾರೆ.



