Latest

ಶಾಸಕರಿಗೂ ವಕ್ಕರಿಸಿದ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ರಾಜ್ಯಾದ್ಯಂತ ಮಹಾಮಾರಿ ಕೊರೊನಾ ವೈರಸ್ ಗಲ್ಲಿ ಗಲ್ಲಿಗೂ ವ್ಯಾಪಿಸುತ್ತಿದ್ದು, ಇದೀಗ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ್ ಅವರಿಗೆ ಕೊರೊನಾ ಪಾಸಿಟೀವ್ ಬಂದಿದೆ.

ಈ ಕುರಿತು ಸ್ವತ: ಶಾಸಕರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು, ತನಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ತಿಳಿಸಿದ್ದಾರೆ. ಕೊರೊನಾ ಗುಣಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಸೋಂಕು ತಗುಲಿರೋದು ಖಚಿತವಾಗಿದೆ. ಹಾಗಾಗಿ ನನ್ನ ಸಂಪರ್ಕದಲ್ಲಿ ಇದ್ದವರು ಹೋಂ ಕ್ವಾರಂಟೈನ್ ನಲ್ಲಿರಿ. ಗುಣಲಕ್ಷಣಗಳು ಕಂಡು ಬಂದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಕೊರೊನಾ ಪಾಸಿಟೀವ್ ಹಿನ್ನಲೆಯಲ್ಲಿ ಶಾಸಕರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಶಾಸಕರ ಕುಟುಂಬಸ್ಥರು ಕೂಡ ಕೋವಿಡ್ ಪರೀಕ್ಷೆಗೆ ಒಳಗಾಗುತ್ತಿದ್ದಾರೆ.

Home add -Advt

Related Articles

Back to top button