Karnataka News

*ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಇಬ್ಬರು ಸಿಬ್ಬಂದಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕಲಬುರಗಿಯಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದ ಘಟನೆಗೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಲಾಗಿದೆ.

ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಇಬ್ಬರು ಸಿಬ್ಬಂದಿಗಳಾದ ಶರಣಗೌಡ ಹಾಗೂ ಗಣೇಶ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಕಮಿಷನರ್ ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.

ಪರೀಕ್ಷಾರ್ಥಿ ಶ್ರೀಪಾದ್ ಪಾಟೀಲ್, ನೀಟ್ ಪರೀಕ್ಷೆಗೆ ಹಾಜರಾಗಿದ್ದ ವೇಳೆ ಸಿಬ್ಬಂದಿಗಳು ಆತನ ಜನೀವಾರ ತೆಗೆಸಿದ್ದರು. ಈಬಗ್ಗೆ ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button