Kannada NewsKarnataka NewsLatest

*ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಕಾನ್ಸ್ ಟೇಬಲ್*: *5 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಲಂಚ ಪಡೆಯುತ್ತಿದಗಲೇ ರೆಡ್ ಹ್ಯಾಅಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ ಪೊಲೀಸ್ ಕಾನ್ಸ್ ಟೇಬಲ್ ಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಭೀಮಾನಾಯಕ್‌ ಜೈಲು ಶಿಕ್ಷೆಗೆ ಒಳಗಾದ ಪೊಲೀಸ್‌ ಕಾನ್‌ಸ್ಟೇಬಲ್‌. 30 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕಾನ್‌ಸ್ಟೇಬಲ್‌ಗೆ ಭೀಮಾನಾಯಕ್ ಗೆ ಕೋರ್ಟ್‌ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಲಯದಿಂದ ಈ ಆದೇಶ ಹೊರಬಿದ್ದಿದೆ. ನಿವೇಶನ ವಿವಾದ ಬಗೆಹರಿಸಲು 30 ಸಾವಿರ ಲಂಚ ಪಡೆಯುವಾಗ ಭೀಮಾನಾಯಕ್‌ ಲೋಕಾಯುಕ್ತ ಬಲಗೆ ಬಿದ್ದಿದ್ದರು. 2022 ರಲ್ಲಿ ಈ ಪ್ರಕರಣ ನಡೆದಿತ್ತು.

ಬ್ರಹ್ಮಪುರ ಠಾಣೆಯ ಕಾನ್‌ಸ್ಟೇಬಲ್ ಆಗಿದ್ದ ಭೀಮಾನಾಯಕ್ ವಿರುದ್ಧ ಪ್ರಕರಣ ದಾಖಲಿಸಿ ಲೋಕಾಯುಕ್ತ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ಬಳಿಕ‌ ಕೋರ್ಟ್‌ ಐದು ವರ್ಷ ಜೈಲು ಶಿಕ್ಷೆ ಮತ್ತು 60 ಸಾವಿರ ದಂಡ ವಿಧಿಸಿದೆ.

Related Articles

Back to top button