ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ಕಲಬುರಗಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಗುಂಡಿನ ಸದ್ದು ಕೇಳಿದೆ. ಡಕಾಯಿತಿ ಪ್ರಕರಣದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಡಕಾಯಿತಿ ಪ್ರಕರಣದಲ್ಲಿ ಮಾರಕಾಸ್ತ್ರ ವಶಕ್ಕೆ ಪಡೆಯಲು ತೆರಳಿದ್ದ ವೇಳೆ ಆರೋಪಿ ಮುಬ್ಬಿನ್ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯುತ್ನಿಸಿದ್ದನು. ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಕಾಲಿಗೆ ಫೈರಿಂಗ್ ಮಾಡಿದ್ದಾರೆ.
ಗಾಯಗೊಂಡ ಆರೋಪಿ ಮುಬ್ಬಿನ್ ನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆಯಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ