Latest

ಆತ್ಮಹತ್ಯೆಗೆ ಶರಣಾದ ಸಹೋದರಿಯರು

ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ಅಕ್ಕ-ತಂಗಿಯಿಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ.

ಐಶ್ವರ್ಯಾ ಸುತಾರ (20) ಹಾಗೂ ಸಾರಿಕಾ ಸುತಾರ (17) ಆತ್ಮಹತ್ಯೆಗೆ ಶರಣಾದ ಸಹೋದರಿಯರು. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

Home add -Advt

ತಂದೆ ವಿಶ್ವನಾಥ ಸುತಾರ ಐನಾಪುರ ಗ್ರಾಮದಲ್ಲಿ ಚಹಾ ಅಂಗಡಿ ನಡೆಸುತ್ತಿದ್ದರು. ಇವರಿಗೆ ಒಟ್ಟು ಐವರು ಹೆಣ್ಣುಮಕ್ಕಳಿದ್ದರು ಇವರಲ್ಲಿ ಮೂವರ ವಿವಾಹವಾಗಿತ್ತು. ತಂದೆ ಅಂಗಡಿಗೆ ತೆರಳಿದ್ದ ವೇಳೆ ಇಬ್ಬರೂ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ.

Related Articles

Back to top button