
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಬರ್ತ್ ಡೇ ಸೆಲೆಬ್ರೇಷನ್ ನಲ್ಲಿ ತಲ್ವಾರ್ ಹಿಡಿದು ನೃತ್ಯ ಮಾಡಿ ಪುಂಡಾಟ ಮೆರೆದಿದ್ದ 7 ಜನರನ್ನು ಕಲಬುರ್ಗಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಪ್ರೋಜ್, ತಬ್ರೇಜ್, ಇಮ್ರಾನ್, ರಶೀದ್, ತಲ್ಹಾ, ಸೋಹೆಲ್ ಹಾಗೂ ಜಹೀರ್ ಎಂದು ಗುರುತಿಸಲಾಗಿದೆ.
ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಅನುಮತಿಯಿಲ್ಲದೇ ಸಾರ್ವಜನಿಕ ಸ್ಥಳದಲ್ಲಿ ವೇದಿಕೆ ಹಾಕಿ ಬರ್ತ್ ಡೇ ಆಚರಿಸಿಕೊಂಡಿದ್ದರು. ಬಳಿಕ ಡಿಜೆ ಹಾಡಿಗೆ ತಲ್ವಾರ್ ಹಿಡಿದು ಡಾನ್ಸ್ ಮಾಡಿದ್ದರು. ಈ ಪ್ರಕರಣ ಸಂಬಂಧ ಇದೀಗ 7 ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
 
					 
				 
					 
					 
					 
					
 
					 
					 
					


