ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಬಾಂಬ್ ಬೆದರಿಕೆ ಕರೆ, ಸಂದೇಶಗಳು ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಏರ್ ಪೋರ್ಟ್ ಸ್ಫೋಟಿಸುವುದಾಗಿ ಸಂದೇಶ ರವಾನಿಸಲಾಗಿದೆ.
ಅನಾಮಧೇಯ ವ್ಯಕ್ತಿಯೊಬ್ಬನಿಂದ ಕಲಬುರಗಿ ವಿಮಾನ ನಿಲ್ದಾಣದ ಕಚೇರಿಗೆ ಇ-ಮೇಲ್ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ. ಏರ್ ಪೋರ್ಟ್ ಸ್ಫೋಟಿಸುವುದಾಗಿ ಹೇಳಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ. ಪ್ರಯಾಣಿಕರ ಬ್ಯಾಗ್ ಗಳನ್ನು ತಪಾಸಣೆ ನಡೆಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ