
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಮತ್ತೊಂದು ಅವಘಡ ಸಂಭವಿಸಿದೆ. ಬಿಸಿಯೂಟದ ಸಾಂಬಾರ್ ಪಾತ್ರೆಗೆ 2ನೇ ತರಗತಿ ವಿದ್ಯಾರ್ಥಿನಿ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಿಯಲ್ಲಿ ನಡೆದಿದೆ.
2ನೇ ತರಗತಿ ವಿದ್ಯಾರ್ಥಿನಿ ಮಹಾಂತಮ್ಮ ಗಾಯಾಳು ವಿದ್ಯಾರ್ಥಿನಿ. ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗಾಯಾಳುವನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
 
					 
				 
					 
					 
					 
					
 
					 
					 
					


