
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ದುಷ್ಕರ್ಮಿಗಳು ಮರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ತಾಲೂಕಿನಲ್ಲಿ ನಡೆದಿದೆ.
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಚಿತ್ತಾಪುರದಿಂದ ಕಲಬುರ್ಗಿಗೆ ತಮ್ಮ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಶಹಾಬಾದ್ ಬಳಿ ಅವರ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಬಿಯರ್ ಬಾಟಲ್ ಗಳಿಂದ ಮಾರಣಾಂತಿಕವಾಗಿ ಹೊಡೆದಿದ್ದಾರೆ. ಮಣಿಕಂಠ ರಾಠೋಡ್ ಗಂಭೀರವಾಗಿ ಗಾಯಗೊಂಡಿದ್ದು, ಕಲಬುರ್ಗಿ ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆ ನಡೆಸಿದ ದುಷ್ಕರ್ಮಿಗಳು ಯಾರೆಂಬುದು ತಿಳಿದಿಲ್ಲ. ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.