Latest

ಬದುಕಿನ ಸಂಚಾರ ಮುಗಿಸಿದ ವಿಜಯ್; ಮಣ್ಣಲ್ಲಿ ಮಣ್ಣಾದ ನಟ

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಭೀಕರ ರಸ್ತೆ ಅಪಘಾತದಿಂದ ವಿಧಿವಶರಾಗಿದ್ದ ರಾಷ್ಟ್ರಪ್ರಶಸ್ತಿ ವಿಜೇತ, ಕನ್ನಡ ಚಿತ್ರರಂಗದ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲುಕಿನ ಪಂಚನಹಳ್ಳಿಯಲ್ಲಿ ಸಂಚಾರಿ ವಿಜಯ್ ಸ್ನೇಹಿತ ರಘು ಅವರ ತೋಟದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.

ಕುಪ್ಪೂರು ಯತೀಶ್ವರ ಶಿವಾಚಾರ್ಯ ಶ್ರ‍ಿಗಳ ನೇತೃತ್ವದಲ್ಲಿ ವಿಜಯ್ ಸಹೋದರರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ಪೊಲೀಸರಿಂದ ಮೂರು ಸುತ್ತುಕುಶತೋಪುಹಾರಿಸಿ, ರಾಷ್ಟ್ರಗೀತೆ ಮೊಳಗಿಸಿ ಗೌರವ ಸಲ್ಲಿಸಲಾಯಿತು.

ಬಳಿಕ ಸಮಾಧಿ ಸ್ಥಳದಲ್ಲಿ ಸಂಚಾರಿ ವಿಜಯ್ ಪಾರ್ಥೀವಶರೀರವಿಟ್ಟು, ಬಿಲ್ವಪತ್ರೆ, ಭಸ್ಮ ಬಳಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ನಟ ಸಂಚಾರಿ ವಿಜಯ್ ಅವರ ಅಂಗಾಂಗ ದಾನ ಮಾಡಲಾಗಿದ್ದು, ಐವರ ಬದುಕಿನಲ್ಲಿ ಬೆಳಕಾಗಿದ್ದಾರೆ ಈ ಮೂಲಕ ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದಾರೆ.
ಬೆಳಗಾವಿಯಲ್ಲಿ ಪೊಲೀಸರಿಗೇ ಹೊಡೆದ ಯುವಕರು

Home add -Advt

Related Articles

Back to top button