
ಪ್ರಗತಿವಾಹಿನಿ ಸುದ್ದಿ: ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಸೆಪ್ಟೆಂಬರ್17ರಂದು ಕಲಬುರಗಿಯ ಮಿನಿ ವಿಧಾನಸೌಧದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದಲ್ಲಿ ಸಚಿವ ಸಂಪುಟ ನಡೆಯಲಿದೆ.
ಅಂದು ಸಂಜೆ 4 ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿಷಯಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ. ಆದರೆ ವಿಷಯ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ.