Latest

ದೇವಸ್ಥಾನದಿಂದ ವಾಪಸ್ಸಾಗುವಾಗ ಭೀಕರ ಅಪಘಾತ; ಸ್ಥಳದಲ್ಲೇ ಐವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಕಲಬುರ್ಗಿ ಜಿಲ್ಲೆ ಅಫಜಲಪುರ ಹೊರವಲಯದಲ್ಲಿ ನಡೆದಿದೆ.

ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಿಂದ ವಾಪಸ್ ಆಗುತ್ತಿದ್ದ ಕಾರು ಅಫಜಲಪುರ ಬಳಿ ಮರಕ್ಕೆ ಡಿಕ್ಕಿಹೊಡೆದಿದೆ. ಪರಿಣಾಮ ಕಾರು ಚಾಲಕ ಹಾಗೂ ನಾಲ್ವರು ಮಹಿಳೆಯರು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Home add -Advt

ಮೃತರು ಮಹಾರಾಷ್ಟ್ರದ ಅಹ್ಮದ್ ನಗರದವರು ಎನ್ನಲಾಗಿದೆ. ಗಾಣಗಾಪುರದಿಂದ ಅಫಜಲಪುರ ಮಾರ್ಗವಾಗಿ ಮಹಾರಾಷ್ಟ್ರದ ಕಡೆಗೆ ಕಾರು ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಫಜಲಪುರ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಲಿಕಾಪ್ಟರ್ ಪತನ ಪ್ರಕರಣ; ಓರ್ವ ಪೈಲಟ್ ಸಾವು

Related Articles

Back to top button