
ಪ್ರಗತಿವಾಹಿನಿ ಸುದ್ದಿ: ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತಾಯಿ ಹಾಗೂ ಮೂವರು ಮಕ್ಕಳು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ಇಟವಾ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ತಾಯಿ ಅಂಜನಾ, ಮಕ್ಕಳಾದ ಕಾರ್ತಿಕ್, ಖುಷಿ ಹಾಗೂ ಕೀರ್ತನಾ ಗಾಯಾಳುಗಳು. ಗಾಯಾಳುಗಳನ್ನು ಕಲಬುರ್ಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಕೀರ್ತನಾಳಿಗೆ ಗಂಭೀರವಾದ ಗಾಯಗಳಾಗಿವೆ. ಚಿಕಿತ್ಸೆ ಮುಂದುವರೆದಿದೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.