Latest

ಡಿವೈಎಸ್ ಪಿ ವಿಜಯಲಕ್ಷ್ಮಿಗೆ 4 ವರ್ಷ ಜೈಲುಶಿಕ್ಷೆ

ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಡಿವೈಎಸ್ ಪಿ ವಿಜಯಲಕ್ಷ್ಮೀ ಅವರಿಗೆ 4 ವರ್ಷ ಜೈಲುಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಡಿವೈಎಸ್ ಪಿ ಆಗಿದ್ದ ವಿಜಯಲಕ್ಷಿ ವಿರುದ್ಧ ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೈಲುಶಿಕ್ಷೆ ವಿಧಿಸಲಾಗಿದೆ.

ವಿಜಯಲಕ್ಷ್ಮಿ ಶಹಬಾದ್ ಇನ್ಸ್ ಪೆಕ್ಟರ್ ಆಗಿದ್ದ ವೇಳೆ ವ್ಯಕ್ತಿಯೊಬ್ಬರ ವಾಹನ ಬಿಡುಗಡೆ ಮಾಡಲು 25 ಸಾವಿರ ರೂ ಲಂಚ ಪಡೆದುಕೊಳ್ಲುವಾಗ ಸಿಕ್ಕಿ ಬಿದ್ದಿದ್ದರು.

Related Articles

Back to top button