
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಅನಾಹುತಗಳು ಸೃಷ್ಟಿಯಾಗಿದ್ದು, ಮನೆ ಗೋಡೆ, ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ.
ಚಿತ್ತಾಪುರ ಪಟ್ಟಣದಲ್ಲಿ ಈ ದುರಂತ ಸಂಭವಿಸಿದ್ದು, ತಡರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದಿದೆ. ಮನೆಯಲ್ಲಿ ಮಲಗಿದ್ದ ಮಹಿಳೆ ಆರೀಫಾ ಬೇಗಂ (60) ಎಂಬುವವರು ಕುಸಿದು ಬಿದ್ದ ಮೇಲ್ಛಾವಣಿಯಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು.
ಘಟನೆಯಲ್ಲಿ ಆರೀಫಾ ಬೇಗಂ ಪತಿ ಸರ್ಧಾರ್ ಅಲಿ ಹಾಗೂ ಮಗಳು ಯಾಸ್ಮಿನ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಗಾಯಾಳು ಆರೀಫಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ