Kannada NewsKarnataka NewsLatest

*ವಕೀಲನ ಬರ್ಬರ ಹತ್ಯೆ ಕೇಸ್; 24 ಗಂಟೆಯೊಳಗೆ ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕಲಬುರ್ಗಿಯಲ್ಲಿ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಗುಲಬರ್ಗಾ ವಿವಿ ಪೊಲಿಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವಕೀಲ ಈರಣ್ಣಗೌಡ ಪಾಟೀಲ್ ನಿನ್ನೆ ಕೋರ್ಟ್ ಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಈಗ ಅವಣ್ಣ ನಾಯಿಕೊಡಿ, ಮಲ್ಲಿನಾಥ್ ನಾಯಿಕೊಡಿ, ಭಾಗೇಶ್ ಎಂಬ ಮೂವರು ಆರೋಪಿಗಳನ್ನು ಗುಲಬರ್ಗಾ ವಿವಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Home add -Advt

ಮತ್ತೋರ್ವ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ತೀವ್ರಗೊಳಿಸಲಾಗಿದೆ. ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಿನ್ನೆ ಕೋರ್ಟ್ ನಲ್ಲಿ ಅಂತಿಮ ವಿಚಾರಣೆ ಇತ್ತು. ವಕೀಲ ಈರಣ್ಣಗೌಡ ಪಾಟೀಲ್ ಕೋರ್ಟ್ ಗೆ ತೆರಳುತ್ತಿದ್ದಾಗ ಹೊಂಚು ಹಾಕಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ನಾಲ್ಕು ದಿನಗಳಿಂದ ಕಲಬುರ್ಗಿ ಲಾಡ್ಜ್ ನಲ್ಲಿ ವಾಸವಾಗಿದ್ದ ದುಷ್ಕರ್ಮಿಗಳು ವಕೀಲನ ಹತ್ಯೆಗೆ ಹೊಂಚು ಹಾಕಿ ಕಾದು ನಿನ್ನೆ ಹತ್ಯೆ ಮಾಡಿದ್ದರು ಎಂದು ತಿಳಿದುಬಂದಿದೆ.


Related Articles

Back to top button