Kannada NewsKarnataka NewsLatest

*ಮತ್ತೊಂದು ಹೇಯ ಕೃತ್ಯ; ಬಾಲಕ, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಸಾಲು ಸಾಲು ದೌಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಯೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಡೆದಿರುವ ಬೆನ್ನಲ್ಲೇ ಬಾಲಕ ಹಾಗೂ ಬಾಲಕಿ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕೆಂಚಾವರಂನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೋರ್ವ 6 ವರ್ಷದ ಬಾಲಕ ಹಾಗೂ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt

ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Related Articles

Back to top button