ಪಾಲಿಕೆ ಆಯುಕ್ತ, ಅಕೌಂಟೆಂಟ್ ಬಂಧನ
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಮಹಾನಗರ ಪಾಲಿಕೆ ಆಯುಕ್ತರೇ ಲಂಚಕ್ಕಾಗಿ ಕೈಯೊಡ್ದಿ ಎಸಿಬಿ ಬಲೆಗೆ ಬಿದ್ದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತ ಶಂಕ್ರಣ್ಣ ವಣಿಕ್ಯಾಳ ಅವರನ್ನು ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಕೋವಿಡ್ ಸುರಕ್ಷತಾ ಚಕ್ರದ ಹೆಲ್ಪ್ ಲೈನ್ ನಿರ್ದೇಶಕ ಶರಣಬಸಪ್ಪ ಬಳಿ ಪಾಲಿಕೆ ಆಯುಕ್ತ ಶಂಕ್ರಣ್ಣ 7 ಲಕ್ಷದ 50 ಸಾವಿರ ಬಿಲ್ ಮಾಡಲು ಶೇ.2ರಷ್ಟು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಶರಣಬಸಪ್ಪ ಎಸಿಬಿಗೆ ದೂರು ನೀಡಿದ್ದರು.
ಇದೀಗ ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತ ಶಂಕ್ರಣ್ಣ ವಣಿಕ್ಯಾಳ ಹಾಗೂ ಅಕೌಂಟೆಂಟ್ ಚನ್ನಪ್ಪ ಇಬ್ಬರನ್ನು ಬಂಧಿಸಿದ್ದಾರೆ.
ಗೋಕಾಕ್: ನಡೆದು ಹೋಗುತ್ತಿದ್ದವನನ್ನು ಕಲ್ಲಿನಿಂದ ಹೊಡೆದು ಕೊಂದ ದುಷ್ಕರ್ಮಿಗಳು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ