ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ದೇಶದಲ್ಲೇ ಕೊರೊನಾ ಸೋಂಕು ಮೊದಲು ಬಲಿ ಪಡೆದಿದ್ದ ರಾಜ್ಯದ ಕಲಬುರಗಿ ಜಿಲ್ಲೆಯಲ್ಲಿ ಈವರೆಗೆ ಒಂದೇ ಒಂದು ಟೆಸ್ಟ್ ಲ್ಯಾಬ್ ಇರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಮಾಜಿ ಸಚಿವ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಖರ್ಗೆ,ಜಿಮ್ಸ್ ಆಸ್ಪತ್ರೆಯಲ್ಲಿ ಮಾತ್ರ ಕೊರೊನಾ ಟೆಸ್ಟ್ ಲ್ಯಾಬ್ ಇದೆ. ಇಲ್ಲಿ ಪ್ರತಿನಿತ್ಯ ಸಾವಿರ ಸ್ಯಾಂಪಲ್ಸ್ ಗಳನ್ನು ಮಾತ್ರ ಟೆಸ್ಟ್ ಮಾಡಲಾಗುತ್ತಿದೆ. ಇನ್ನೂ ಕೂಡ ಕಲಬುರಗಿ ಜಿಲ್ಲೆಯ ಐದು ಸಾವಿರ ಸ್ಯಾಂಪಲ್ಸ್ ವರದಿ ಬಾಕಿಯಿದೆ. ಕಲಬುರಗಿ ಜಿಲ್ಲೆಗೆ ಅತಿ ಹೆಚ್ಚು ವಲಸೆ ಕಾರ್ಮಿಕರು ಬಂದಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಬಿಟ್ಟರೆ ಅತಿ ಹೆಚ್ಚು ಕೊರೊನಾ ಸೋಂಕಿತರು ಇರೋದು ಕಲಬುರಗಿ ಜಿಲ್ಲೆಯಲ್ಲಿ. ಆದರೂ ಕೂಡ ಸರ್ಕಾರ ಮತ್ತೊಂದು ಕೊರೊನಾ ಟೆಸ್ಟ್ ಲ್ಯಾಬ್ ಪ್ರಾರಂಭಿಸಿಲ್ಲ. ಕೊರೊನಾ ಲ್ಯಾಬ್ ರಿಪೋರ್ಟ್ ಗಾಗಿ ನಾಲ್ಕೈದು ದಿನ ಕಾಯಬೇಕಾದ ಸ್ಥಿತಿ ಎದುರಾಗಿದೆ. ಕಲಬುರಗಿಯಲ್ಲಿ ಮೂಲಭೂತ ಸೌಕರ್ಯದ ಕೊರತೆಯಿಲ್ಲಾ, ರಾಜಕೀಯ ಇಚ್ಚಾಶಕ್ತಿಯ ಕೊರತೆ ಇದೆ. ಜಿಲ್ಲೆಯ ESICಯಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಲು ಸರ್ಕಾರ ವಿಫಲವಾಗಿದೆ. ಕೂಡಲೇ ಪರೀಕ್ಷಾ ಕೇಂದ್ರ ಸ್ಥಾಪಿಸಲು ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡುತ್ತಿದ್ದೇನೆ.
ಅನೇಕ ಸ್ಯಾಂಪಲ್ಸ್ ಗಳನ್ನು ಇನ್ನು ಕೂಡ ಬೆಂಗಳೂರು ಲ್ಯಾಬ್ ಗೆ ಜಿಲ್ಲಾಡಳಿತ ಕಳಿಸ್ತಿದೆ. ನಗರದ ಇಎಸ್‍ಐ ಆಸ್ಪತ್ರೆಯಲ್ಲಿ ಈ ಹಿಂದೆ ಲ್ಯಾಬ್ ಪ್ರಾರಂಭ ಮಾಡೋದಾಗಿ ಹೇಳಿತ್ತು. ಕಲಬುರಗಿ ನಗರದಲ್ಲಿ ಎರಡು ಖಾಸಗಿ ಮೆಡಿಕಲ್ ಕಾಲೇಜುಗಳಿವೆ. ಆದರೆ ಲ್ಯಾಬ್ ಪ್ರಾರಂಭಕ್ಕೆ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ