
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಟ್ಯಾಂಕರ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘೋರ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಾ ಬಳಿ ನಡೆದಿದೆ.
ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದಾರೆ ಎಂದು ತಿಳಿದುಬಂದಿದೆ. ನಾಸ್ಮೀನ್ ಬೇಗಂ, ಬಿ.ಬಿ.ಫಾತಿಮಾ, ಅಬೂಬಕರ್, ಮರಿಯಮ್, ಮೊಹಮ್ಮದ್
ಪಾಷಾ, ಆಟೋ ಚಾಲಕ ಬಾಬಾ ಎಂದು ಗುರುತಿಸಲಾಗಿದೆ. ಮೃತರು ನಾಲವಾರ ಗ್ರಾಮದವರು.
ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಿಸಲು ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ವಾಡಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ