Kannada NewsKarnataka NewsLatestUncategorized

PSI ಕೈಲಿದ್ದ ಲೋಡೆಡ್ ರಿವಾಲ್ವರ್ ಕಸಿದು ಪರಾರಿಯಾದ; ಮರವೇರಿ ಕುಳಿತ ಕಳ್ಳ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಖತರ್ನಾಕ್ ಕಳ್ಳನೊಬ್ಬನನ್ನು ಹಿಡಿಯಲು ಹೋದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅವರ ರಿವಾಲ್ವರ್ ನ್ನೇ ಕಿತ್ತುಕೊಂಡು ಕಳ್ಳ ಪರಾರಿಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದೆ.

ಬಳ್ಳೂರ್ಗಿ ಮೂಲದ ಖಾಜಾ ಎಂಬ ಕಳ್ಳನನ್ನು ಹಿಡಿಯಲು ಬೆಂಗಳೂರು ಸಿಸಿಬಿ ಪೊಲೀಸರು ಅಫಜಲಪುರಕ್ಕೆ ಆಗಮಿಸಿದ್ದು, ಕಳ್ಳನನ್ನು ಬಂಧಿಸುವ ವೇಳೆ ಪಿಎಸ್ ಐ ಭೀಮರಾವ್ ಬಂಕಲಿ ಅವರ ಸರ್ವಿಸ್ ರಿವಾಲ್ವರ್ ಕಸಿದುಕೊಂಡು ಎಸ್ಕೇಪ್ ಆಗಿದ್ದಾನೆ.

ಖಾಜಾ ಬೆಂಗಳೂರು, ಕಲಬುರ್ಗಿ, ಅಫಜಲಪುರ ಸೇರಿದಂತೆ ಹಲವೆಡೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು. ನಿನ್ನೆಯಿಂದ ಖಾಜಾನ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕಳ್ಳನನ್ನು ಹಿಡಿಯಲು ಹೋದಾಗ ಆತ ಕಾರಿನಲ್ಲಿ ಕುಳಿತಿದ್ದ ಪಿಎಸ್ ಐ ಸರ್ವಿಸ್ ರಿವಾಲ್ವರ್ ಹಿಡಿದು ಕಾರಿನ ಗಾಜು ಒಡೆಯಲು ಯತ್ನಿಸಿದ್ದರು. ಈ ವೇಳೆ ಪಿಎಸ್ ಐ ಕೈಯಲ್ಲಿದ್ದ ಲೋಡೆಡ್ ರಿವಾಲ್ವರ್ ಕಸಿದುಕೊಂಡು ಪರಾರಿಯಾಗಿದ್ದಲ್ಲದೇ ಮರವೇರಿ ಕುಳಿತಿದ್ದಾನೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button